ಕಳೆದ ತಿಂಗಳು ಕೂಡಾ ವಾಣಿಜ್ಯ ಸಿಲಿಂಡರ್ ಮೇಲಿನ ಬೆಲೆಯಲ್ಲಿ ಕಡಿತ ಮಾಡಲಾಗಿದೆ. ಈ ಹಿಂದೆ ಜೂನ್ ಒಂದರಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಮೇಲಿನ ಬೆಲೆಯು 135 ರೂಪಾಯಿ ಇಳಿಕೆಯಾಗಿತ್ತು.
Table of Contents
ವಾಣಿಜ್ಯ LPG cylinder ಬೆಲೆ ಇಳಿಕೆ
ದೇಶದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಈ ಮೂಲಕ ಗ್ರಾಹಕರಿಗೆ ಸಿಹಿ ಸುದ್ದಿ ದೊರೆತಿದೆ. ದೆಹಲಿಯಲ್ಲಿ ಶುಕ್ರವಾರ ಜುಲೈ 1ರಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂಪಾಯಿ 198 ಕಡಿತ ಮಾಡಲಾಗಿದೆ.
ಇನ್ನು ಕೋಲ್ಕತ್ತಾದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದು ರೂಪಾಯಿ 182ರಷ್ಟು ಇಳಿಕೆಯಾಗಿದೆ. ಮುಂಬೈನಲ್ಲಿ ರೂಪಾಯಿ 190.50 ಇಳಿಕೆಯಾದರೆ, ಚೆನ್ನೈನಲ್ಲಿ ರೂಪಾಯಿ 187ರಷ್ಟು ಇಳಿಕೆಯಾಗಿದೆ.
ಇನ್ನು ಪೆಟ್ರೋಲಿಯಂ ಸಂಸ್ಥೆ ಇಂಡಿಯನ್ ಆಯಿಲ್ ಕೂಡಾ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದೆ. ಆದರೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮೇ 19ರಂದು ಗೃಹ ಬಳಕೆಯ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ.
ಕಳೆದ ತಿಂಗಳು ಕೂಡಾ ವಾಣಿಜ್ಯ ಸಿಲಿಂಡರ್ ಮೇಲಿನ ಬೆಲೆಯಲ್ಲಿ ಕಡಿತ ಮಾಡಲಾಗಿದೆ. ಈ ಹಿಂದೆ ಜೂನ್ ಒಂದರಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಮೇಲಿನ ಬೆಲೆಯು 135 ರೂಪಾಯಿ ಇಳಿಕೆಯಾಗಿತ್ತು.
ಬದಲಾಗಿಲ್ಲ ಗೃಹ ಬಳಕೆಯ ಎಲ್‌ಪಿಜಿ ದರ
ಈ ನಡುವೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ತಿಂಗಳು ದೆಹಲಿಯಲ್ಲಿ ಬೆಲೆಯು ರೂಪಾಯಿ 1,003ಕ್ಕೆ ಏರಿಕೆಯಾಗಿದೆ. ಒಂದು ತಿಂಗಳಲ್ಲೇ ಎರಡು ಬಾರಿ ಗೃಹ ಬಳಕೆಯ ಎಲ್‌ಪಿಜಿ ದರ ಹೆಚ್ಚಳವಾಗಿದೆ. ಸಿಲಿಂಡರ್‌ಗೆ ಸುಮಾರು ರೂಪಾಯಿ 53.50ರಷ್ಟು ಹೆಚ್ಚಳವಾಗಿದೆ. ಈ ಬಳಿಕ ದೇಶದ ಹಲವಾರು ಪ್ರಮುಖ ನಗರಗಳಲ್ಲಿ ಎಲ್‌ಪಿಜಿ ದರವು ಒಂದು ಸಾವಿರದ ಗಡಿ ದಾಟಿದೆ. ಈ ನಡುವೆ ಕಳೆದ ಮೇ ತಿಂಗಳಿನಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಲೆ ಸ್ಥಿರವಾಗಿದೆ.